ಸೀಟ್ ಬೆಲ್ಟ್ ಹಾಕಿದ್ದರಿಂದ ಬಸ್ ಪಲ್ಟಿ ಹೊಡೆದ್ರೂ ಪ್ರಾಣ ಉಳಿಯಿತು

0
5

ಬೀಜಿಂಗ್: ಹೆದ್ದಾರಿಯಲ್ಲಿ ಬಸ್ಸೊಂದು ಕಾರ್ ಗೆ ಡಿಕ್ಕಿಯಾದರೂ ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸೀಟ್ ಬೆಲ್ಟ್ ಧರಿಸಿದ್ದರಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ಅಪಘಾತದ ದೃಶ್ಯ ಬಸ್ ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಅಪಘಾತ ಅಕ್ಟೋಬರ್ 1ರಂದು ಸುಮಾರು ಮಧ್ಯಾಹ್ನ 1.55ಕ್ಕೆ ಚೀನಾದ ಝುಝೌ ಸಿಟಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಸೀಟ್ ಬೆಲ್ಟ್ ಹಾಕಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಹೆದ್ದಾರಿಯಲ್ಲಿ ಬಸ್ ಅತಿ ವೇಗದಿಂದ ಹೋಗುತ್ತಿತ್ತು. ಈ ವೇಳೆ ಬಸ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಿಡಿಯೋದಲ್ಲಿ ಬಿಳಿ ಶರ್ಟ್ ತೊಟ್ಟಿರುವ ಮಹಿಳೆಯನ್ನು ಹೊರತುಪಡಿಸಿ, ಎಲ್ಲರೂ ಸೀಟ್ ಬೆಲ್ಟ್ ಧರಿಸಿದ್ದಾರೆ. ಸೀಟ್ ಬೆಲ್ಟ್ ಹಾಕದೇ ಇದ್ದ ಮಹಿಳೆ ಮಾತ್ರ ಬಸ್ ನ ಒಂದು ಬದಿಯಿಂದ ಇನ್ನೊಂದು ಬದಿಗೆ ಬಂದು ಗಾಯಗೊಂಡಿದ್ದಾರೆ. ಇನ್ನುಳಿದ ಪ್ರಯಾಣಿಕರೆಲ್ಲಾ ಸೀಟ್ ಬಿಟ್ಟು ಸಹ ಬಂದಿಲ್ಲ.

ಬಸ್ ಅಥವಾ ಕಾರಿನಲ್ಲಿ ಪ್ರಯಾಣಿಸುವವರು ಸೀಟ್ ಬೆಲ್ಟ್ ಧರಿಸಬೇಕೆಂಬ ನಿಯಮವಿದ್ದರೂ, ಹಲವರು ಧರಿಸಲ್ಲ. ಭಾರತದಲ್ಲಿ ಸೀಟ್ ಬೆಲ್ಟ್ ಹಾಕದೇ ಇರುವದರಿಂದ ಒಂದು ಗಂಟೆಗೆ ಸುಮಾರು 17 ಪ್ರಯಾಣಿಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here