ಸರಗಳ್ಳತನ ಮಾಡಿದ್ದ ಡಬಲ್ ಮೀನಿಂಗ್ ಸಿನಿಮಾದ ನಿರ್ಮಾಪಕ ಅರೆಸ್ಟ್

0
6

ಬೆಂಗಳೂರು: ಸರಗಳ್ಳತನ ಮಾಡುತ್ತಿದ್ದ ಸ್ಯಾಂಡಲ್‍ವುಡ್ ನಿರ್ಮಾಪಕನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ನಿರ್ಮಾಪಕನನ್ನು ಪ್ರತಾಪ್ (ರಂಗು ಅಲಿಯಾಸ್ ರಂಗ) ಎಂದು ಗುರುತಿಸಲಾಗಿದೆ. ಹಲವು ಸರಗಳ್ಳತನ ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದು, ಇಂದು ಈತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, 15 ದಿನಗಳ ಹಿಂದೆ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿದ್ದ. ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಅನಂತಪುರ ಜಿಲ್ಲೆಯ ಮಡಕಸೀರಾದಲ್ಲಿ ಈತ ತಲೆಮರೆಸಿಕೊಂಡಿದ್ದು, ಶುಕ್ರವಾರ ಸಂಜೆ ಎಂಎಸ್ ಬಿಲ್ಡಿಂಗ್ ಬಳಿ ಆರೋಪಿ ನಿರ್ಮಾಪಕನನ್ನು ಬಸವೇಶ್ವರನಗರ ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಡಬಲ್ ಮೀನಿಂಗ್ ಸಿನಿಮಾದ ನಿರ್ಮಾಪಕನಾಗಿದ್ದು, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ ಸರಗಳ್ಳತನ ಮಾಡುತ್ತಿದ್ದ. ಸದ್ಯ ಬಂಧಿತ ಆರೋಪಿಯನ್ನ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here